ವಿಟ್ಲ: ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮೂರ್ಕಜೆ ಮೈತ್ರೇಯಿ ಗುರುಕುಲಮ್‍ನ ವಿದ್ಯಾರ್ಥಿನಿ ಪೂರ್ಣಿಮಾ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ| ವಿದ್ಯಾ ಟಿ ರೈ ಭಾಗವಹಿಸಿದ್ದರು. ವೇದಿಕೆಯಲ್ಲಿ ಮಾತೃ ಮಂಡಳಿಯ ಪ್ರಮುಖ್ ಮೀನಾಕ್ಷಿದೇವಿ ಉಪಸ್ಥಿತರಿದ್ದರು.

vm (1)

vm (2)ಈ ಕಾರ್ಯಕ್ರಮದಲ್ಲಿ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಢಳಿಯವರು ಭಜನೆ ನಡೆಸಿಕೊಟ್ಟರು. ಉದಯೇಶ ಕೆದಿಲಾಯ ಪೂಜಾ ವಿಧಿ ನೆರವೇರಿಸಿದರು. ರಾಜೇಶ್ವರಿ ಸ್ವಾಗತಿಸಿದರು. ರೇವತಿ ವಂದಿಸಿದರು. ಮೂಕಾಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ನಂದಿನಿ ಸಹಕರಿಸಿದರು.

By suddi9

Leave a Reply

Your email address will not be published. Required fields are marked *