ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಲಯನ್ಸ್ ಕ್ಲಬ್, ಲಯನೆಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಸೇನಾ ನೇಮಕಾತಿ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೇನಾ ನೇಮಕಾತಿ ಅಧಿಕಾರಿ ಲೆ| ಕ| ಪ್ರಶಾಂತ್ ಪೇಟ್ಕರ್ ಸಂಪನ್ಮೂಲ ವ್ಯಕಿ ಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಈ ಕಾರ್ಯಕ್ರಮವನ್ನು ಲಯನ್ ಕೆ ಸಿ ಪ್ರಭು ಉದ್ಘಾಟಿಸಿದರು.

army (1)

army (2)

army (3)ವಲಯಾಧ್ಯಕ್ಷ ಸತೀಶ್ ಕುಮಾರ್ ಆಳ್ವ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಡಾ| ಗೀತಪ್ರಕಾಶ್ ವೇದಿಕೆಯಲ್ಲಿದ್ದರು. ಅಧ್ಯಕ್ಷತೆ ವಹಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್ ಸ್ವಾಗತಿಸಿದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ವಂದಿಸಿದರು. ಶಿಕ್ಷಕ ಮೋಹನ್ ಬಿ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *