ಬಂಟ್ವಾಳ: ಬೆಳ್ಳೂರು ವಲಯ ಬಂಟರ ಸಂಘದ ವತಿಯಿಂದ ರವಿವಾರ ಬೆಳಗ್ಗೆ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ವಠಾರದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಜಮಾನ ಮುಂಡಡ್ಕಗುತ್ತು ರತ್ನಾಕರ ಶೆಟ್ಟಿ, ಬಂಟ ಸಮಾಜದ ಸಬಲೀಕರಣಕ್ಕಾಗಿ ಬಂಟರ ಸಂಘದ ಮಹತ್ವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಬೆಳ್ಳೂರು ವಲಯ ಅಧ್ಯಕ್ಷ ಕಿಶೋರ್ ಎ.ಭಂಡಾರಿ ವಹಿಸಿ ಶುಭ ಹಾರೈಸಿದರು. ಬೆಳ್ಳೂರು ಶಾಲೆಯ ಮುಖ್ಯೋಪಾಧ್ಯಾಯ ಸಂಕಪ್ಪ ಶೆಟ್ಟಿ ಆಟಿಡೊಂಜಿ ಕೂಟದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆ ಹಾಗೂ ಸಂಗೀತ ಸ್ಪರ್ಧೆಗಳು ನಡೆದವು. ತುಳನಾಡಿನ ವಿವಿಷ್ಟ ವಿವಿಧ ಬಗೆಯ ಖಾದ್ಯಗಳ ಉಟೋಪಚಾರ ವ್ಯವಸ್ಥೆ ಮಾಡಲಾಗಿತ್ತು.
ಕೂರಿಯಾಳ ಗುತ್ತು ರಘುನಾಥ ಪಯ್ಯಡೆ, ಬಂಟರ ಸಂಘ ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ಮಲ್ಲಿಕಾ ವಿ. ಶೆಟ್ಟಿ, ಬಡಗ ಬೆಳ್ಳೂರು ಗ್ರಾಮ ಪಂಚಾಯತ್ ಸದಸ್ಯ ಮೋಹನ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಎನ್. ಗಾಂಭೀರ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಧನ್ಯವಾದಗೈದು ಕಾರ್ಯಕ್ರಮ ನಿರೂಪಿಸಿದರು.
