ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ( ಇಂದು) ಬೆಳಗ್ಗಿನ ಜಾವಾ 4.30 ಕ್ಕೆ ಗೋವಾದಿಂದ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಸೂಪರ್ ಪಾಸ್ಟ್ ರೈಲಿನಲ್ಲಿ ಬಂದಿಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. 
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸಿಟಿ ರವಿ ಸೇರಿದಂತೆ ಬಿಜೆಪಿಯ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಅಮಿತ್ ಶಾ ಅವರನ್ನು ಸ್ವಾಗತಿಸಿದರು. ಇಂದು ಅಮಿತ್ ಶಾ ತಿರಂಗ ಯಾತ್ರೆಯ ಅಂಗವಾಗಿ ಪಂಪ್ವೆಲ್ ಸರ್ಕಲ್ ನಲ್ಲಿ ಸುಮಾರು ಒಂದು ಸಾವಿರ ತ್ರಿವರ್ಣ ದ್ವಜ ಬೈಕ್ ಜಾಥಕ್ಕೆ ಚಾಲನೆ ನೀಡಲಿದ್ದು ಬಳಿಕ ಉಳ್ಳಾಲ ಸರ್ಕಲ್ ನಲ್ಲಿ ಉಳ್ಳಾಲ ರಾಣಿ ಅಬ್ಬಕ್ಕ ಅವರ ಪ್ರತಿಮೆಗೆ ಮಾಲರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ, ಬಳಿಕ ಕೋಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
