ಮೂಡುಬಿದಿರೆ: ಕಲ್ಲಬೆಟ್ಟುವಿನ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಬಾಲಕರ ವಿಭಾಗದಲ್ಲಿ ತಾಳಿಪ್ಪಾಡಿಯ ಪೊಂಪೈ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿರ ವಿಭಾಗದಲ್ಲಿ ಎಕ್ಸಲೆಂಟ್ ಪಿಯು ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ಜೈನ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಿಯಾಗಿದೆ. ಒಟ್ಟು 9 ಕಾಲೇಜಿನ ತಂಡಗಳು ಭಾಗವಹಿಸಿದ್ದವು.
ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಆಲ್ವಿನ್ ಮಿರಾಂಡ ಪಂದ್ಯಾಟಕ್ಕೆ ಚಾಲನೆ ನೀಡಿದರು. ಇನೋವೇಟಿವ್ ಲರ್ನಿಂಗ್ ಫೌಂಡೇಶನ್ನ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸಲೆಂಟ್ ಕಾಲೇಜಿನ ಪ್ರಾಂಶುಪಾಲ ಸುರೇಶ್ಬಾಬು ನಾಯರ್, ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಕಾಶ್ ಉಪಸ್ಥಿತರಿದ್ದರು. ಸಂಸ್ಕøತ ಉಪನ್ಯಾಸಕ ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.
—
