ಬಂಟ್ವಾಳ: ಕಾರ್ಮಿಕನೋರ್ವ ಕಟ್ಟಡದಿಂದ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಬಿ.ಸಿ.ರೋಡಿನಲ್ಲಿ ಸಂಭವಿಸಿದೆ. ಬಿ.ಸಿ.ರೋಡಿಗೆ ಸಮೀಪದ ಕಾಮಾಜೆ ನಿವಾಸಿ ಸಂಜೀವ ಸಪಲ್ಯ(53) ಮೃತಪಟ್ಟವರಾಗಿದ್ದಾರೆ. ಇವರು ಬಿ.ಸಿ.ರೋಡಿನ ಪದ್ಮ ಕಾಂಪ್ಲೆಕ್ಸ್‍ನ ಮೂರನೆ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದು ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಸಹ ಕಾರ್ಮಿಕನಾಗಿ ದುಡಿಯುತ್ತಿದ್ದರು. ಮೃತ ದೇಹದ ಮರಣೋತ್ತರ ಪರೀಕ್ಷೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು.
ಸುದ್ದಿ ತಿಳಿದ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದ ಕುಮಾರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಎಡಿಷನಲ್ ಎಸ್ಪಿ ವೇದಮೂರ್ತಿ, ಡಿವೈಎಸ್ಪಿ ರವೀಶ್ ಸಿ.ಆರ್., ಸಿಐ ಮಂಜಯ್ಯ ಅವರು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *