ಕಡಂಬು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 10 ನೇವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಶ್ರೀ ಮಾಗಂದಡಿ ಚಾವಡಿ ಶ್ರೀ ಮಲರಾಯಿ ಸೇವಾ ಟ್ರಸ್ಟ್ನ ಅಧ್ಯಕ್ಷ ರಾಮಚಂದ್ರ ಬನ್ನಿಂತಾಯ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ ಶೆಟ್ಟಿಗಾರ್ ಮತ್ತು ಕಾಂತಪ್ಪ ಗೌಡ ಬನ ಉಪಸ್ಥಿತರಿದ್ದರರು. ಈ ಸಂದರ್ಭದಲ್ಲಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿಂದೂ ಜಾಗರಣ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಧಾರ್ಮಿಕ ಉಪನ್ಯಾಸ ನೀಡಿದರು. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಧವ ಮಾವೆ ಮಾಜಿ ತಾ ಪಂ ಸದಸ್ಯ, ವಿಟ್ಲ ಜೆಸಿಐ ಅಧ್ಯಕ್ಷ ಬಾಬು ಕೊಪ್ಪಳ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಅಭಿಜಿತ್ ಸಾಲಿಯಾನ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುರ್ಶನ ಪಡಿಯಾರ್ ಭಾಗವಹಿಸಿದ್ದರು. ಸಮಿತಿ ಅಧ್ಯಕ್ಷ ಪ್ರದೀಪ್ ಗೌಡ ವೇದಿಕೆಯಲ್ಲಿದ್ದರು. ಸದಸ್ಯ ಗಂಗಾಧರ ಸ್ವಾಗತಿಸಿದರು. ಕಾರ್ಯದರ್ಶಿ ಜಯರಾಮ ಅನಿಲಕಟ್ಟೆ ವರದಿ ವಾಚಿಸಿದರು. ಗೌರವಾಧ್ಯಕ್ಷ ರಾಘವ ಗೌಡ ಬನ ವಂದಿಸಿದರು. ಹರೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

