ಶಿಕ್ಷಕರ ಅಸ್ತಿತ್ವಕ್ಕೆ ಹೋರಾಟ ಅನಿವಾರ್ಯ: ಟಿ.ನಾರಾಯಣ ಭಟ್ ರಾಮಕುಂಜ
ಬಂಟ್ವಾಳ: ಪ್ರಸಕ್ತ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾಥರ್ಿಗಳ ಸಂಖ್ಯೆ ವೃದ್ಧಿಸುವುದರ ಜೊತೆಗೆ ಹೆಚ್ಚುವರಿ ಶಿಕ್ಷಕರ ಗೊಂದಲವೂ ನಿವಾರಣೆಯಾಗುತ್ತದೆ. ಸಕರ್ಾರವು ಗರಿಷ್ಟ ಮೂಲಭೂತ ಸೌಕರ್ಯ ಒದಗಿಸಿದಾಗ ಶೈಕ್ಷಣಿಕ ಕೆಲಸದ ಒತ್ತಡದ ನಡುವೆಯೂ ಶಿಕ್ಷಕರು ಸ್ವತಃ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುವ ಅನಿವಾರ್ಯತೆ ಎದುರಾಗಿದೆ ಎಂದು ಶ್ರೀ ರಾಮಕುಂಜೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ರಾಷ್ಟ್ರಪ್ರಶಸ್ತಿ ಟಿ.ನಾರಾಯಣ ಭಟ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕಕರ್ೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

6btl-Guruvandane
ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಮಮತಾ ಎಸ್.ಗಟ್ಟಿ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ಜಿಲ್ಲೆ ಮತ್ತು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮೂವರು ಶಿಕ್ಷಕರು ಸಹಿತ 47 ಮಂದಿ ನಿವೃತ್ತ ಶಿಕ್ಷಕರು, ಇಬ್ಬರು ಸೇವಾದಳ ಶಿಕ್ಷಕರಿಗೆ ಗುರುವಂದನೆ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಾಷರ್ಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಗಳಿಸಿದ ಇಬ್ಬರು ಶಿಕ್ಷಕರ ಮಕ್ಕಳನ್ನು ಗುರುತಿಸಿ ಗೌರವಿಸಲಾಯಿತು.
ಬಂಟ್ವಾಳ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೊ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಚೆನ್ನಕೇಶವ, ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಎಂ.ಉಮಾನಾಥ ರೈ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ಮತ್ತಿತರರು ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲೋಕೇಶ್ ಸ್ವಾಗತಿಸಿ, ಶಿಕ್ಷಣ ಸಂಯೋಜಕ ರಾಜೇಶ್ ವಂದಿಸಿದರು. ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.
—-

—-

By Suddi9

Leave a Reply

Your email address will not be published. Required fields are marked *