ವಿಟ್ಲ: ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಟ್ಲ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಪುತ್ತೂರು ಪಾಪೆಮಜಲು ಇಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
