ವಿಟ್ಲ: ಶ್ರೀ ಕ್ಷೇ. ಧ. ಗ್ರಾ. ಯೋ. ವಿಟ್ಲ ವಲಯ , ರೋಟರಿ ಕ್ಲಬ್ ವಿಟ್ಲ ಮತ್ತು ವಿಠಲ ಪ್ರೌಢ ಶಾಲೆಯ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ `ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ನಡೆಸಲಾಯಿತು.
ಜನಜಾಗೃತಿ ವೇದಿಕೆ ವಿಟ್ಲ ವಲಯದ ಅಧ್ಯಕ್ಷ ಬಾಲಕೃಷ್ಣ ಕಾರಂತ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಿಯೋಜಿತ ಅಧ್ಯಕ್ಷ ಸಂಜೀವ ಎಂ ವೇದಿಕೆಯಲ್ಲಿದ್ದರು. ವಲಯ ಮೇಲ್ವಿಚಾರಕ ಸ್ವಾಗತಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಭಟ್ ಸಿ. ಹೆಚ್ ವಂದಿಸಿದರು. ಸೇವಾ ಪ್ರತಿನಿಧಿ ಜನಾರ್ಧನ ಪದ್ಮಶಾಲಿ ನಿರೂಪಿಸಿದರು. ಸೇವಾಪ್ರತಿನಿಧಿ ಪ್ರಕಾಶ್ ಕೋಡಿ ಸಹಕರಿಸಿದರು.
