ಬಂಟ್ವಾಳ : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಬಾಷ್ ಕೌಡಿಚ್ಚಾರ್ ರವರನ್ನು ವಕೀಲ ಸಂಘದ ವತಿಯಿಂದ ಸಂಘದ ಆವರಣದಲ್ಲಿ ಸನ್ಮಾನಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು., ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಆರ್. ಮಹೇಶ್ , ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ನ್ಯಾಯವಾದಿಗಳಾದ ಪುಂಡಿಕಾೈ ನಾರಾಯಣ ಭಟ್, ಜಯರಾಮ್ ರೈ, ಗಣೇಶ್ ಪೈ ಉಪಸ್ಥಿತರಿದ್ದರು.

