ಬೆಂಗಳೂರು: ಜೀ ಟಿವಿಯ ಜನಪ್ರಿಯ ರಿಯಾಲಿಟಿ ಶೋ ‘ಡ್ರಾಮಾ ಜ್ಯೂನಿಯರ್ಸ್’ ಗ್ರ್ಯಾಂಡ್ ಫಿನಾಲೆಯಲ್ಲಿ ಗದಗಿನ ಪುಟ್ಟರಾಜು ಹಾಗೂ ಮಂಗಳೂರಿನ ಚಿತ್ರಾಲಿ ಜಂಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಭಾನುವಾರ ಸಂಜೆ ಗದಗ್ ನಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಮಹೇಂದ್ರ ಮೊದಲ ರನ್ನರ್ ಅಪ್ ಆಗಿದ್ದರೆ, ಅಮೋಘಾ ಎರಡನೇ ರನ್ನರ್ ಅಪ್ ಆಗಿದ್ದಾರೆ. ವಿಜೇತರ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಹೊರಹಾಕಿಲ್ಲ. ಫೈನಲ್ ನಲ್ಲಿ ಅಚಿಂತ್ಯಾ, ತುಷಾರ್, ಪುಟ್ಟರಾಜು, ಚಿತ್ರಾಲಿ, ಮಹೇಂದ್ರ, ರೇವತಿ ಹಾಗೂ ತೇಜಸ್ವಿನಿ ಸ್ಪರ್ಧಿಸಿದ್ದರು.

