ವಿಟ್ಲ: ವಿಟ್ಲ ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲೀಯೊ ಕ್ಲಬ್ ವತಿಯಿಂದ ವಿಟ್ಲದ ಸರಕಾರಿ ಪದವಿ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಮಾಹಿತಿ ಕಾರ್ಯಕ್ರಮ ಮತ್ತು ವಿಟಾಲಯನ್ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್ ಮಾಹಿತಿ ನೀಡಿದರು. ವಲಯಾಧ್ಯಕ್ಷ ಸತೀಶ್ ಕುಮಾರ್ ಆಳ್ವ ವಿಟಾಲಯನ್ ಬಿಡುಗಡೆ ಮಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಹರೀಶ್ ನಾಯಕ್, ಲಯನೆಸ್ ಕ್ಲಬ್ ಅಧ್ಯಕ್ಷೆ ಲೀನಾ, ಕಾಲೇಜಿನ ಪ್ರಾಂಶುಪಾಲ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥತರಿದ್ದರು.

