ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆತ್ತಿಗುಡ್ಡೆಯಲ್ಲಿ ವೃದ್ಧರೊಬ್ಬರು ಕೋಟ್ಯಪ್ಪ ಶೆಟ್ಟಿಗಾರ್(70) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.
ಮೃತರು ಪತ್ನಿ ಮತ್ತು ಮೂವರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ. ಅವರಿಗೆ ಕಳೆದ ಹಲವು ಸಮಯದ ಹಿಂದೆ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದ್ದು ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದರ ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗುರುವಾರ ಮಧ್ಯಾಹ್ನ ಮನೆ ಮಂದಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪುತ್ರ ತಾರನಾಥ ಶೆಟ್ಟಿಗಾರ್ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

