ವಿಟ್ಲ : ಅಕ್ಟೋಬರ್ 7, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಶಾರದ ಪೂಜೆಯನ್ನು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ನಾರಾಯಣ ಶೆಟ್ಟಿಯವರಿಂದ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು.

ವಿದ್ಯಾರ್ಥಿಗಳಿಗೆ ಭಜನಾ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸುಮಾರು 12 ತಂಡಗಳು ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ವಿದ್ಯಾರ್ಥಿಗಳು ತಬಲ, ತಮ್ಕಿ , ಥಾಸೆ, ತಾಳ, ಡೋಲು ಉಪಯೋಗಿಸಿ ಭಜನೆ ನಡೆಸಿದ್ದು ಆಕರ್ಷಕವಾಗಿತ್ತು. ಶಾಲಾ ವಾಹನಗಳಿಗೆ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಮಹಾಮಂಗಳಾರತಿಯ ಬಳಿಕ ಪ್ರಸಾದ ವಿತರಿಸಲಾಯಿತು. ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ, ಉಪಾಧ್ಯಕ್ಷೆ ಲಕ್ಷ್ಮೀ ಟೀಚರ್, ಯಕ್ಷಗಾನ ತರಬೇತುದಾರ ದಿವಾಣ ಶಿವಶಂಕರ್ ಭಟ್ ಬಹುಮಾನ ವಿತರಿಸಿದರು.


ಶಾಲಾ ಸಂಚಾಲಕ ಪ್ರಹ್ಲಾದ್.ಜೆ,ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಡಾ|| ಬಿ. ಎಸ್ ನಾಯ್ಕ್ , ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ.ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್. ಪಿ. ಸಲ್ದಾನ ಹಾಗೂ ಪೋಷಕರು ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ಸಂಧ್ಯಾರವರು ತೀರ್ಪುಗಾರರಾಗಿ ಸಹಕರಿಸಿದರು. ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸ್ವಾಗತಿಸಿ, ವಂದಿಸಿದರು.
