ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಇಲ್ಲಿನ ಪಲ್ರ್ಯ ಕೊಡಂಗೆ ನಿವಾಸಿ ವೆಂಕಪ್ಪ(65) ಮೃತಪಟ್ಟವರು. ಇವರು ಕೈಕಂಬದ ಕಾರ್ಪೊರೇಷನ್ ಬ್ಯಾಂಕ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂನಿಂದ ಪುತ್ತೂರುಗೆ ತೆರಳುತ್ತಿದ್ದ ಸರಕಾರಿ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದಿಂದ ತಲೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯರು ತುಂಬೆ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತುಂಬೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
