ಮೂಡುಬಿದಿರೆ: ಮಂಗಳೂರಿನ ಪ್ರತಿಷ್ಠಿತ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಮೈಕಲ್ ಸಾಂತ್ಮಯೋರ್ ಅವರ ಮೇಲೆ ವಿದ್ಯಾರ್ಥಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ದ.ಕ. ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಖಂಡಿಸಿದೆ.
ಶಿಕ್ಷಕರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ನಿಯಮಾಳಿಯನ್ನು ರೂಪಿಸಿ, ಶಿಕ್ಷಕರಿಗೆ ಸೂಕ್ತ ರಕ್ಷಣೆ ಕೊಡುವಲ್ಲಿ ವಿಫಲವಾಗಿದೆ. ತಪ್ಪಿಸ್ಥರ ಮೇಲೆ ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ಆರೋಪಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸುತ್ತೇವೆ. ಮುಂದಿನ ಮೂರು ದಿನಗಳ ಒಳಗೆ ತಪ್ಪಿತಸ್ಥರನ್ನು ಬಂಧಿಸಿ, ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡದಿದ್ದರೆ, ಕಥೋಲಿಕ್ ಸಭಾ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ನಡೆಯುವ ಹೋರಾಟಕ್ಕೆ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೋಯ್ಲಸ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

