ಮೂಡುಬಿದಿರೆ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‍ನ(ಎಸ್‍ಕೆಪಿಎ) ಮೂಡುಬಿದಿರೆ ವಲಯದ 2016-17ನೇ ಸಾಲಿನ ಪದಗ್ರಹಣ ಸಮಾರಂಭವು ಸಮಾಜಮಂದಿರದಲ್ಲಿ ನಡೆಯಿತು.

mbd_oct26_7-3

ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ವಾಸುದೇವ ರಾವ್ ಸಮಾರಂಭ ಉದ್ಘಾಟಿಸಿ, ಎಸ್‍ಕೆಪಿಎ ಮೂಡುಬಿದಿರೆ ಪ್ರಬಲವಾದ ಸಂಘಟನೆ. ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಪ್ರಾಮಾಣಿಕ ಪ್ರಯತ್ನ, ವ್ಯವಸ್ಥೆಯಲ್ಲಿ ಅಚ್ಚುಕಟ್ಟುತನದಿಂದ ಸಂಘಟನೆ ಬಲಗೊಳ್ಳುತ್ತದೆ ಎಂದರು.

mbd_oct267-5

ಎಸ್‍ಕೆಪಿಎ ದ.ಕ ಹಾಗೂ ಉಡುಪಿ ಜಿಲ್ಲಾ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿರ್ಗಮನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ನೂತನ ಅಧ್ಯಕ್ಷಕ, ಪದಾಧಿಕಾರಿಗಳಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ನೂತನ ಅಧ್ಯಕ್ಷ ಮಣೀಂದ್ರ ಕೋಟೆಬಾಗಿಲು ಮಾತನಾಡಿ, ಸಂಘದ ಪ್ರತಿಯೊಬ್ಬ ಸದಸ್ಯರು ನಾಯಕತ್ವ ಗುಣವಿದೆ. ಎಲ್ಲ 70 ಸದಸ್ಯರು ಸಾಂಘಿಕ ಪ್ರಯತ್ನದಿಂದ ಮುಂಬರುವ ದಿನಗಳಲ್ಲಿ ಉತ್ತಮ ಯೋಜನೆಗಳನ್ನು, ಸಮಾಜಮುಖಿ ಕೆಲಸಗಳನ್ನು ಮಾಡಬಹುದು ಎಂದರು.

ನೂತನ ಉಪಾಧ್ಯಕ್ಷ ರವಿ ಕೋಟ್ಯಾನ್ ಅವರ ಪುತ್ರಿ, ಪ್ರತಿಭಾನ್ವಿತ ವಿದ್ಯಾರ್ಥಿನಿ ಮಾನಸ ಹಾಗೂ ರಾಷ್ಟ್ರೀಯ ಫೋಟೋಗ್ರಾಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರತನ್ ಬಾರಾಡಿ ಅವರನ್ನು ಪುರಸ್ಕರಿಸಲಾಯಿತು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪಡುಮಾರ್ನಾಡಿನ ದಿನಕರ್ ಅವರ ಚಿಕಿತ್ಸೆಗಾಗಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಉದಯವಾಣಿ ರಾಷ್ಟ್ರೀಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರು, ಎಸ್‍ಕೆಪಿಎ ಉಭಯ ಜಿಲ್ಲೆಗಳ ಪ್ರಧಾನ ಕಾರ್ಯದರ್ಶಿ ಮಧು ಮಂಗಳೂರು, ಸಲಹಾ ಸಮಿತಿ ಅಧ್ಯಕ್ಷ ವಿಠಲ ಚೌಟ, ಎಸ್‍ಕೆಪಿಎ ಮೂಡುಬಿದಿರೆ ವಲಯದ ಗೌರವಾಧ್ಯಕ್ಷ ಭಾನುಪ್ರಕಾಶ್ ರಾವ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಭಯಕುಮಾರ್ ಜೈನ್ ಮುಖ್ಯ ಅತಿಥಿಯಾಗಿದ್ದರು. ನಿರ್ಗಮನ ಕಾರ್ಯದರ್ಶಿ ಸುನಿಲ್ ಕೋಟ್ಯಾನ್, ಕೋಶಾಧಿಕಾರಿ ರಾಜೇಶ್ ಎಸ್.ಅಮೀನ್ ಉಪಸ್ಥಿತರಿದ್ದರು.

ವಿಲ್ಫೇಡ್ ಮೆಂಡೋನ್ಸಾ, ದೇವಾನಂದ ಭಟ್ ಕಾರ್ಯಕ್ರಮ ನಿರೂಪಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪಿಂಗಾರ ಕಲಾವಿದರು ಬೆದ್ರ ತಂಡದಿಂದ ಬಲೆ ತೆಲಿಪಾವ ಕಾರ್ಯಕ್ರಮ ಜರುಗಿತು.

By suddi9

Leave a Reply

Your email address will not be published. Required fields are marked *