ಬಂಟ್ವಾಳ: ಬಂಟ್ವಾಳ ತಾಲೂಕು ಎಲಿಯನಡುಗೋಡು ಗ್ರಾಮದ ಮಾಗಣೆಗೊಳಪಟ್ಟ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜಿಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ಇದರ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಅ.29ರಂದು ಶನಿವಾರ ಬೆಳಗ್ಗೆ 10.30ಕ್ಕೆ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಲಿದೆ.
ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸುವರು. ಪೂಂಜ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಆಚಾರ್ಯ,ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಮತ್ತಿತರ ಗಣ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

