ವಿಟ್ಲ: ರಾಜ್ಯ ಮಟ್ಟದ ಕನ್ನಡ ಜನಪದ ಕಲೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ಮತ್ತು ಯಕ್ಷಗಾನದಲ್ಲಿ ಸಾಧನೆ ಮಾಡಿದ ವಿಠಲ ಪ್ರೌಢ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ವಿ. ಸುದರ್ಶನ ಪಡಿಯಾರ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

