ಉಳ್ಳಾಲ: ಪಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವೆಂಬರ್ 5 ರಂದು ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ ಮತ್ತು ತಾಂತ್ರಿಕ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪಿ.ಯು.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಅಭ್ಯಾಸಮಾಡುತ್ತಿರುವ ವಿದ್ಯಾರ್ಥಿ/ನಿಯರು ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜ್ಞಾನಮಾದರಿ, ರಸಪ್ರಶ್ನೆ, ಪ್ರಬಂಧ, ಭಾಷಣದ ಮೂಲಕ ತಾಂತ್ರಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಪ್ರದರ್ಶನ ಅಥವಾ ವಿಷಯ ಮಂಡಣೆ ಮಾಡಬಹುದಾಗಿದೆ.
ಆಸಕ್ತ ಪಿ.ಯು.ಸಿ ಕಾಲೇಜಿನ ವಿದ್ಯಾರ್ಥಿ/ನಿಯರಿಗೆ ಹಾಗೂ ಸಾರ್ವಜನಿಕರಿಗೆ ಬೆಳಿಗ್ಗೆ 11:00 ರಿಂದ ಅಪರಾಹ್ನ 3:00 ರವರೆಗೆ ಪ್ರದರ್ಶನ ಸ್ಥಳಕ್ಕೆ ಭೇಟಿನೀಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

