ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಿನಿಂದ ಮನೆ ತೆರಿಗೆ ಸಹಿತ ಕಟ್ಟಡ ಮತ್ತಿತರ ಮೇಲೆ 4ರಿಂದ 10 ಪಟ್ಟು ಹೆಚ್ಚಳ ಮಾಡಲಾಗಿದೆ. ರಸ್ತೆ ಹೊಂಡ ಮುಚ್ಚುವ ಕಾಮಗಾರಿ ಮತ್ತು ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇಲ್ಲಿನ ನರಿಕೊಂಬು ಮತ್ತು ಶಂಭೂರು ನಾಗರಿಕ ಜಾಗೃತ ಸಮಿತಿ ವತಿಯಿಂದ ಇದೇ 5ರಂದು ಬೆಳಿಗ್ಗೆ 9.30 ಗಂಟೆಗೆ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪ್ರಕಾಶ ಕಾರಂತ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

