ಮೂಡುಬಿದಿರೆ: ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ಎರಡು ದಿನಗಳು ನಡೆಯುವ ಮೂಡಬಿದಿರೆ ವಲಯ ಮಟ್ಟದಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ನೀಡಲಾಯಿತು.

kridajyoti

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ, ಗೌರವ ರಕ್ಷೆ ಸ್ವೀಕರಿಸಿದರು. ಸದ್ಯದಲ್ಲೇ ಕುಸ್ತಿ ಅಖಾಡವನ್ನು ಸಿದ್ಧಗೊಳಿಸಲಾಗುವುದೆಂದು ಭರವಸೆ ನೀಡಿದರು. ಮೂಡುಬಿದಿರೆ ಪುರಸಭಾಧ್ಯಕ್ಷೆ ರೂಪಾ ಎಸ್. ಶೆಟ್ಟಿ ಧ್ವಜಾರೋಹಣಗೈದರು. ಉದ್ಯಮಿ ಕೆ. ಶ್ರೀಪತಿ ಭಟ್ ಕ್ರೀಡಾಜ್ಯೋತಿ ಬೆಳಗಿಸಿದರು.

kridakuta

ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದರು. ಜಿ.ಪಂ. ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಉದ್ಯಮಿ ಶ್ರೀಧರ ಶೆಟ್ಟಿ ಮಾಣಿಲ, ಕಲ್ಲಮುಂಡ್ಕೂರು, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಬಳಗದ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ , ನಿಡ್ಡೋಡಿ ನಿಖಿಶಾ ಟವರ್ಸ್‍ನ ಎಂ.ಬಿ. ಕರ್ಕೇರ, ಕಲ್ಲಮುಂಡ್ಕೂರು ತಾ.ಪಂ. ಸದಸ್ಯ ಸುಕುಮಾರ ಸನಿಲ್ ಮುಖ್ಯ ಅತಿಥಿಗಳಾಗಿದ್ದರು. ರಾಜ್ಯ, ರಾಷ್ಟ್ರ ಮಟ್ಟದ ಕೀಡಾಕೂಟಗಳಲ್ಲಿ ಸಾಧನೆಗೈದ ಮೂಡಬಿದಿರೆ ವಲಯ ಮಟ್ಟದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸರ್ವೋದಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್. ಪಶುಪತಿ ಶಾಸ್ತ್ರಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ರಾಜಶ್ರೀ ಪ್ರಸ್ತಾವನೆಗೈದರು. ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ವಂದಿಸಿದರು. ಮಿಜಾರು ಸ.ಪ್ರೌಢಶಾಲಾ ಮುಖ್ಯ ಶಿಕ್ಷಕ ನವೀನ್‍ಚಂದ್ರ ಅಂಬೂರಿ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *