ಅಡ್ಡೂರಿನ ಯುವಕ ರಸ್ತೆ ಅಪಘಾತಕ್ಕೆ ಬಲಿ
ಸುದ್ದಿ9ಕೈಕಂಬ: ಗುರುಪುರ ಕೈಕಂಬ ಸಮೀಪದ ವಿಕಾಸನಗರ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮತ್ತು ಓಮ್ನಿ ನಡುವೆ ಮಖಾಮುಖಿ ಡಿಕ್ಕಿ ಹೊಡೆದ ಕಾರಣ ಈ ದುರ್ಘಟನೆ ಸಂಭವಿಸಿದೆ. ಅಡ್ಡೂರು ಅಂಗಡಿ ಮನೆ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಪುತ್ರ ಮಹಮ್ಮದ್ ಆರೀಸ್(26)ಮೃತಪಟ್ಟ ಯುವಕ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಆರಿಸ್ ಊರಿಗೆ ಬಂದಿದ್ದು, ಈ ಸಂದರ್ಭ ದುರ್ಘಟನೆ ಸಂಭವಿಸಿದೆ. ಭಾನುವಾರ ಬೆಳಗ್ಗೆ ಸುಮಾರು ಏಳು ಗಂಟೆ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಆರಿಸ್ ಬೈಕ್ನಲ್ಲಿ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿರುವ ತನ್ನ ಅಕ್ಕನ ಮನೆಗೆ ಹೊರಟಿದ್ದರು. ಈ ಸಂದರ್ಭ ಮಳಲಿಯಿಂದ ಬ್ಯಾಕರಿ ತಿಂಡಿಯನ್ನು ತುಬಿಸಿಕೊಂಡು ಬಂದ ಓಮ್ನಿ ಕಾರ್ ಕೈಕಂಬದ ವಿಕಾಸ ನಗರ ಎಂಬಲ್ಲಿ ಕಾರ್ ಬೈಕ್ಗೆ ಡಿಕ್ಕಿ ಹೊಡೆಯಿತು. ಬೈಕ್ನಿಂದ ರಸ್ತೆಗೆ ಎಸೆಯಲ್ಪಟ್ಟ ಆರಿಸ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಓಮ್ನಿ ಚಾಲಕ ಅಬ್ದುಲ್ ಮಜೀದ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳದಲ್ಲಿ ಒಮ್ನಿ ಕೂಡ ಪಲ್ಟಿಯಾಗಿ ಜಖಂಗೊಂಡಿದೆ ದುರ್ಘಟನೆಯ ಭೀಕರತೆಗೆ ಸಾಕ್ಷಿಯಾಗಿತ್ತು.



