ಬಂಟ್ವಾಳ: ಬಿ ಸಿ ರೋಡು ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗಳ ಕ್ಷೇಮಾಭ್ಯುದಯ ಘಟಕದ ನೌಕರರ ಸಮಾವೇಶವನ್ನು ದ. ಕ. ಹಾಲು ಒಕ್ಕೂಟದ ನಿರ್ದೇಶಕರಾದ ಡಾ| ಕೆ ಎಂ ಕೃಷ್ಣ ಭಟ್ ಕೋಂಕೋಡಿ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಎನ್ ಕೇಶವ ರಾವ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನೌಕರರ ಒಕ್ಕೂಟದ ಅಧ್ಯಕ್ಷ ಆನಂದ ಎಸ್ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಾಜ್ಯ ಸಂಪನ್ಮೂಲ ವ್ಯಕ್ತಿ ಸೀತಾರಾಮ ಹೆಬ್ಬಾರ್ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕಾರಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಯಶವಂತ ಪ್ರಭು ಹಾಗೂ ಕೋಶಾಧಿಕಾರಿ ಹೇಮಾವತಿ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ದ ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸರೋಜಿನಿ ಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಲಕ್ಷ್ಮಣ ಅಡ್ಯನಡ್ಕ ಸ್ವಾಗತಿಸಿದರು. ಶ್ರೀಲತಾ ಶೆಟ್ಟಿ ಕರೋಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

