ಬಂಟ್ವಾಳ : ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎ.ಪಿ.ಎಂ.ಸಿ.) ನಾಮ ನಿರ್ಧೇಶಿತ ಸದಸ್ಯರಾಗಿ ಕಜೆಕಾರು ಕೆ.ಜಯ ಬಂಗೇರ ಅವರು ಆಯ್ಕೆಯಾಗಿದ್ದಾರೆ.

ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ಈ ಆಯ್ಕೆಯಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಕೆ.ಜಯ ಬಂಗೇರ ಅವರು ಬಡಗಕಜೆಕಾರು ಗ್ರಾಮ ಪಂಚಾಯತ್ನ ವ್ಯಾಪ್ತಿಯ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಗ್ರಾ.ಪಂ.ನ ಹಾಲಿ ಸದಸ್ಯರಾಗಿರುವರು. ಪಾಂಡವರಕಲ್ಲು , ಕಜೆಕಾರು ವ್ಯ.ಸೇ.ಸ.ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರರಾಗಿರುವರು. ಅಲ್ಲದೆ ವಿವಿಧ ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್ ಮತ್ತು ತಾ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್ ಅವರು ಕೆ.ಜಯ ಬಂಗೇರ ಅವರನ್ನು ಅಭಿನಂದಿಸಿರುವರು.
