ಬಂಟ್ವಾಳ: “ನಿರಂತರ ಅಭ್ಯಾಸದಿಂದ ಜೀವನದಲ್ಲಿ ಯಶಸ್ಸು ಸಾಧ್ಯ, ಜೀವನಲ್ಲಿ ಒಂದು ಸಲ ಸೋಲುಂಟಾಯಿತೆಂದು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ಮನಗೊಡದೆ ಅದನ್ನೇ ಗೆಲುವಿನ ಮೆಟ್ಟಿಲನ್ನಾಗಿಸಬೇಕು. ಹಿಂದೀ ಭಾಷೆಯು ನಿಂತ ನೀರಾಗಬಾರದು ಅದರಲ್ಲಿ ಹೊಸತನವನ್ನು ಹುಡುಕಬೇಕು. ರಾಷ್ಟ್ರಭಾಷೆಯಾದ ಹಿಂದಿಯನ್ನು ಪ್ರೀತಿಸಿ ಅದರ ಬಗ್ಗೆ ಅಭಿಮಾನವನ್ನು ಬೆಳೆಸಬೇಕು”, ಎಂದು ಪುತ್ತೂರು ಪಿಲೋಮಿನಾ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಡಾ| ಡಿಂಪಲ್ ಜೆನಿಫರ್ ಫೆರ್ನಾಂಡೀಸ್ ಹೇಳಿದರು.

hindi

ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ನಡೆದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ ವಹಿಸಿದ್ದರು.

ಕಾಲೇಜಿನ ಹಿಂದಿ ಸಂಘದ ಅಧ್ಯಕ್ಷೆ, ಹಿಂದಿ ಉಪನ್ಯಾಸಕಿ ದಿವ್ಯಲಕ್ಷ್ಮಿ ಸಂಪತ್ ರೈ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕು. ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ಕು. ಸಫ್ನಾಝ್ ಧನ್ಯವಾದ ಸಮರ್ಪಣೆ ಮಾಡಿದರು. ಕು,ಶೀತಲ್ ಪಿ.ಜೆ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *