ವಿಟ್ಲ: ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಗ್ರಾಮ ಪಂಚಾಯತ್ ಮಂಚಿ, ಇರಾ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಂಚಿ ಕುಕ್ಕಾಜೆ, ಮಹಾದೇವ ವಿವಿದೋದ್ಧೇಶ ಸಹಕಾರಿ ಸಂಘ ಕುಕ್ಕಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಚಿ ವಲಯದ 23 ಅಂಗನವಾಡಿ ಕೇಂದ್ರಗಳ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ.24ರಂದು ಆಚರಿಸಲಾಯಿತು.

1384065723_happy_childrens_day_wallpaper-730x540

ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್ ಮಹಮ್ಮದ್ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳ ಪ್ರತಿಭೆಯನ್ನು ಗುರುತಿಸುವಲ್ಲಿ ಉತ್ತಮ ವೇದಿಕೆಯೆಂದು ಪ್ರಶಂಸಿದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ ಮಕ್ಕಳ ಪ್ರತಿಭೆಗಳಿಗೆ ಯಾವುದೇ ಜಾತಿ, ಮತ, ಭೇದವಿಲ್ಲ ಎಂಬ ಹಿತನುಡಿಯನ್ನಾಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್‍ನ ಅಧ್ಯಕ್ಷೆ ಪ್ರಮೀಳ, ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಮೋಹನದಾಸ ಶೆಟ್ಟಿ, ಸದಸ್ಯರಾದ ಬದ್ರುದ್ದೀನ್, ಪುಷ್ಪಾ ಕಾಮತ್, ಭಾಗೀರತಿ, ಸೀತಮ್ಮ, ಸುಮ, ಸುಮತಿ, ಇರಾ ಗ್ರಾಮ ಪಂಚಾಯತ್‍ನ ಅಧ್ಯಕ್ಷ ಅಬ್ದುಲ್ ರಝಾಕ್, ಸದಸ್ಯರಾದ ತುಳಸಿ, ಪಾರ್ವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಾ ಕುಮಾರಿ, ರಮೇಶ್ ಉಪಸ್ಥಿತರಿದ್ದರು. ಸುಧಾ ಜೋಶಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರು ಪ್ರಸ್ತಾವಿಕ ಮಾತುಗಳನ್ನಾಡಿದರು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿ ವಂದನಾರ್ಪಣೆಗೈದರು.

By suddi9

Leave a Reply

Your email address will not be published. Required fields are marked *