ಮೂಡುಬಿದಿರೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಬೆಟ್ಟು ಏರಿಮಾರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

21

ಮೃತ ವ್ಯಕ್ತಿಯನ್ನು ಬಾಬು ಪೂಜಾರಿ(70)ಎಂದು ಗುರುತಿಸಲಾಗಿದೆ. ಹಲವು ಸಮಯಗಳಿಂದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದು ಚಿಕಿತ್ಸೆ ಮಾಡಿದರು ಗುಣವಾಗಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಶುಕ್ರವಾರ ಸಂಜೆ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ಅವರನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ಸೇರಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

By suddi9

Leave a Reply

Your email address will not be published. Required fields are marked *