ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 23ನೇ ವರ್ಷದ `ಆಳ್ವಾಸ್ ವಿರಾಸತ್’ ಜನವರಿ ಜ.13ರಿಂದ 15ರವರೆಗೆ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ಭೂಮಿಯ ವೇದಿಕೆಯಲ್ಲಿ ಆಯೋಜಿಸಲಾಗಿದೆ.

virasat

ವಿರಾಸತ್‍ನ ಪೂರ್ವಾರ್ಧದಲ್ಲಿ ಸಂಗೀತವೂ, ಉತ್ತಾರಾರ್ಧದಲ್ಲಿ ನೃತ್ಯವೂ ಸಂಸ್ಕೃತಿ ಪ್ರಿಯರ ಮನಸ್ಸನ್ನು ಸೂರೆಗೊಳ್ಳಲಿದೆ. ಪ್ರತಿದಿನ ಸಂಜೆ 6 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಗಳು ರಾತ್ರಿ 10.30ಕ್ಕೆ ಮುಕ್ತಾಯಗೊಳ್ಳುತ್ತವೆ. ಜನವರಿ 13ರಂದು ಸಂಜೆ 5.45ರಿಂದ 6.30ರವರೆಗೆ ಉದ್ಘಾಟನಾ ಸಮಾರಂಭವಿದೆ.

ಆಳ್ವಾಸ್ ವಿರಾಸತ್ ನಡೆಯಲಿದೆ. ಬೃಹತ್ ವೇದಿಕೆಯಿದಾಗಿದ್ದು, 45 ಸಾವಿರಕ್ಕಿಂತ ಹೆಚ್ಚಿನ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *