ಮೂಡುಬಿದಿರೆ : ಮಾನವ ಹಕ್ಕುಗಳು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ಶನಿವಾರ ನಡೆಯಿತು.

3

ಮಾನವ ಹಕ್ಕು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರಾಧ್ಯಕ್ಷ ಡಾ.ಮೋಹನ್ ರಾವ್ ನಲವಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಾನವ ಹಕ್ಕು ಉಲ್ಲಂಘನೆಯಾಗದಂತೆ ಹಾಗೂ ಭ್ರಷ್ಠಾಚಾರ ನಿರ್ಮೂಲನೆಗಳ ಬಗ್ಗೆ ಇರುವ ಕಾನೂನುಗಳನ್ನು ವಕೀಲರುಗಳು ಜನಸಾಮಾನ್ಯರಿಗೆ ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕೆಂದು ಹೇಳಿದರು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಡಾ.ಶಶಿಕಲಾ ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಇನ್ನೂ ಜೀವಾಂತವಾಗಿರುವ ಜಾತಿ ಪದ್ಧತಿಯನ್ನು ನಿರ್ಮೂಲನೆ ಹಾಗೂ ಮಹಿಳೆಯರಿಗಿರುವ ಹಕ್ಕಿಗಳಿಗೆ ಜಾಸ್ತಿ ಒತ್ತು ನೀಡಬೇಕು. ಹಾಗೂ ಭ್ರಷ್ಠಾಚಾರ ವಿರೋಧದ ಬಗ್ಗೆ ನಮ್ಮೊಳಗೆ ಅರಿವು ಮೂಡಬೇಕು ಎಂದು ಹೇಳಿದರು.

3-a

ಮಾನವ ಹಕ್ಕು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ರತ್ನಾಕರ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು. ಮೂಡುಬಿದಿರೆಯ ವಕೀಲರುಗಳಾದ ಶಾಂತಿ ಪ್ರಸಾದ್ ಹೆಗ್ಡೆ ಮತ್ತು ಮೂಡುಬಿದಿರೆ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ದೇವೇಂದ್ರ ಎನ್.ಪಿ ಮಾನವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಸನ್ಮಾನ : ಆಶ್ರಯದಾತ ರಮೇಶ್ ಶೆಟ್ಟಿ ಉಡುಪಿ ಇವರ ಜನಪರ ಕಾರ್ಯಗಳನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ತಹಶೀಲ್ದಾರ್ ಮೊಹಮ್ಮದ್ ಇಸಾಕ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರಾಜಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಶಂಕರ್, ಪ್ರ.ಕಾರ್ಯದರ್ಶಿ ಸುಭಾಷ್ ಕಾಪಿಕಾಡ್, ಸುಖಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಯೊಗೀಶ್ ಆಚಾರ್ಯ ಸ್ವಾಗತಿಸಿದರು. ಪಾರ್ವತಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಧಾಮ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಸುರೇಂದ್ರ ಕುಮಾರ್ ಅಜ್ರಿ ಕಾರ್ಯಕ್ರಮ ನಿರೂಪಿಸಿದರು. ಸುಕುಮಾರ್ ಶೆಟ್ಟಿ ವಂದಿಸಿದರು.

By suddi9

Leave a Reply

Your email address will not be published. Required fields are marked *