ಬಂಟ್ವಾಳ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಅಶ್ವಾನ್ ಸಾದಿಕ್‍ರವರನ್ನು ಇಂದು ನಡೆದ ತಾಲೂಕು ಪ್ರತಿನಿಧಿಗಳ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ashvan-1ಪ್ರಧಾನ ಕಾರ್ಯದರ್ಶಿಯನ್ನಾಗಿ ಹಮೀದ್ ಸಲ್ಮಾನ್‍ರವರು ಆಯ್ಕೆಯಾದರು. ಸಿಎಫ್‍ಐ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ತಪ್ಸೀರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ತಾಲೂಕು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಂಶೀರ್ ಕಲ್ಲಡ್ಕ ವಾರ್ಷಿಕ ವರದಿ ಮಂಡಿಸಿದರು. 

ಈ ಸಂದರ್ಭದಲ್ಲಿ ಸಿಎಫ್‍ಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಪಿ.ಜೆ. ಹಾಗೂ ಜಿಲ್ಲಾ ಸಮಿತಿ ಸದಸ್ಯ ರಿಯಾಝ್ ಕಡಂಬು ಉಪಸ್ಥಿತರಿದ್ದರು. ತಾಲೂಕಿನ ವಿಟ್ಲ, ಕಲ್ಲಡ್ಕ, ಮೆಲ್ಕಾರ್, ಬಂಟ್ವಾಳ, ಬಿ.ಸಿ.ರೋಡ್ ಮೊದಲಾದ ಕಡೆಗಳಿಂದ ಪ್ರತಿನಿಧಿಗಳು ಭಾಗವಹಿಸಿದರು

By suddi9

Leave a Reply

Your email address will not be published. Required fields are marked *