ಮೂಡುಬಿದರೆ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಸರ್ವಶಿಕ್ಷಣ ಅಭಿಯಾನದ ವತಿಯಿಂದ ಪೆಟ್ಟಿಗೆಯಲ್ಲಿ ಪ್ರಯೋಗಾಲಯ ಕಾರ್ಯಕ್ರಮ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ 2 ದಿನಗಳ ಕಾರ್ಯಗಾರ ಸರ್ಕಾರಿ ಪ್ರೌಢಶಾಲೆ ಪ್ರಾಂತ್ಯದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.
ಶಾಲೆಯ ಮುಖ್ಯ ಶಿಕ್ಷಕಿ ರಾಜಶ್ರೀ ಕಾರ್ಯಗಾರವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಅಗಸ್ತ್ಯ ವಿಜ್ಞಾನ ಕೇಂದ್ರದ ಇಂತಹ ಕಾರ್ಯಕ್ರಮ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರಾಂತ್ಯ ಪ್ರಾಂಥಮಿಕ ಶಾಲೆಯ ಮುಖ್ಯ ಶಿಕ್ಷಕ ಅನಂದ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿನಗರ ಸಿಆರ್ಪಿ ನಾಗರತ್ನ, ಅಗಸ್ತ್ಯ ಫೌಂಡೇಶನ್ ವಲಯ ಅಧಿಕಾರಿ ಸುಬ್ರಹ್ಮಣ್ಯ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಅಗಸ್ತ್ಯ ಫೌಂಡೇಷನ್ನ ಪರಮೇಶ್, ಹನುಮಪ್ಪ ಹಾಗೂ ಮೂಡುಬಿದರೆ ವಲಯದ 43 ಶಿಕ್ಷಕರು ಭಾಗವಹಿಸಿದರು. ಅಗಸ್ತ್ಯ ತರಬೇತಿ ವಿಭಾಗದ ಕದೀರಪ್ಪ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕೇಂದ್ರ ಮುಖ್ಯಸ್ಥ ಕಿರಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

