ಮೂಡುಬಿದಿರೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇವುಗಳ ಬಗ್ಗೆ ಇಲಾಖೆಗಳಿಂದ ಮಾಹಿತಿಗಳನ್ನು ಪಡೆದುಕೊಂಡು ಸವಲತ್ತುಗಳ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದು ಶಹರೀ ರೋಜ್‍ಗಾರ್ ಯೋಜನೆಯ ಸಮುದಾಯ ಸಂಘಟಕ ಮುರಳೀಧರ್ ಹೇಳಿದರು.
ಪರಿಶಿಷ್ಟ ಜಾತಿಯವರಿಗೆ ಪುರಸಭೆ ಹಾಗೂ ಪಂಚಾಯಿತಿನಲ್ಲಿ ಲಭ್ಯವಿರುವ ಸವಲತ್ತುಗಳ ಬಗ್ಗೆ ಕರ್ನಾಟಕ ಆದಿ ದ್ರಾವಿಡ ಮಹಾ ಮಂಡಲ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಮಾಹಿತಿ ಶಿಬಿರದಲ್ಲಿ ಶಹರೀ ರೋಜ್‍ಗಾರ್ ಯೋಜನೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ಆದಿ ದ್ರಾವಿಡ ಮಹಾ ಮಂಡಲದ ಮೂಡುಬಿದಿರೆ ವಲಯದ ಅಧ್ಯಕ್ಷ ಜಯಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಪಿಡಿಓ ಮನೋಹರ ಗೌಡ ಪಂಚಾಯಿತಿನಿಂದ ಸಿಗುವ ಸವಲತ್ತುಗಳ ಬಗ್ಗೆ, ಪುತ್ತಿಗೆ ಗ್ರಾಮದ ಗ್ರಾಮಕರಣಿಕ ಸುರೇಶ್ ಅವರು ಸಾಮಾಜಿಕ ಭದ್ರತೆ ಯೋಜನೆ ಹಾಗೂ ಪುರಸಭೆಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಅವರು ಪುರಸಭೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಗೌರವಾಧ್ಯಕ್ಷ ಶೀನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಶಿವರಾಮ್ ಆನಡ್ಕ ವಂದಿಸಿದರು.
