ಬಂಟ್ವಾಳ: ತಾಲ್ಲೂಕಿನ ಗೋಳ್ತಮಜಲು ಗ್ರಾಮ ಪಂಚಾಯಿತಿನಲ್ಲಿ ರಾಜ್ಯ ಮಟ್ಟದಲ್ಲಿ ನಾಣ್ಯಗಳ ಸಂಗ್ರಹಕ್ಕಾಗಿ ಪ್ರಥಮ ಸ್ಥಾನ ಗೆದ್ದುಕೊಂಡ ಮಹಮ್ಮದ್ ಯಾಸೀರ್ ಕಲ್ಲಡ್ಕ ಇವರನ್ನು ಮಂಗಳವಾರ ಸನ್ಮಾನಿಸಲಾಯಿತು.
ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಭಟ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಮಾಜಿ ಸದಸ್ಯೆ ಐಡಾ ಸುರೇಶ್, ಮುಖ್ಯಶಿಕ್ಷಕ ಅಶ್ರಫ್, ರಾಜೇಶ್ ಕೊಟ್ಟಾರಿ ಮತ್ತಿತರರು ಇದ್ದರು.

