ಬಂಟ್ವಾಳ: ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ಮತ್ತು ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಸೋಮವಾರ ನಡೆದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಲ್ಲಿ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡರು. ಒಕ್ಕೂಟ ಅಧ್ಯಕ್ಷ ಚಂದಪ್ಪ, ಉಪಾಧ್ಯಕ್ಷೆ ಉಷಾ ಪರಮೇಶ್ವರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಸದಸ್ಯ ರಾಘವ ಅಮೀನ್, ಮೇಲ್ವಿಚಾರಕ ಉಮೇಶ್, ಸೇವಾ ಪ್ರತಿನಿಧಿ, ಶ್ಯಾಮಲ, ಸದಾನಂದ ಮತ್ತಿತರರು ಇದ್ದರು.

