ಮೂಡುಬಿದಿರೆ: ಸಂಡೇ ಫ್ರೆಂಡ್ಸ್ ನೂಯಿ ಇದರ 9ನೇ ವರ್ಷದ ವಾರ್ಷಿಕೋತ್ಸವವು ಫ್ರೆಂಡ್ಸ್ ಸರ್ಕಲ್ ನೂಯಿ ವಠಾರದಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಪ್ರೇಮಾ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ತಾ.ಪಂ ಸದಸ್ಯ ಪ್ರಕಾಶ್ ಗೌಡ, ವಕೀಲ ಶಾಂತಿ ಪ್ರಸಾದ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಡೇ ಫ್ರೆಂಡ್ಸ್ನ ಅಧ್ಯಕ್ಷ ಗಿರೀಶ್ ಶೆಟ್ಟಿ, ಸದಸ್ಯ ಗಣೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

