ಬಂಟ್ವಾಳ: ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಫೆ.1ರಿಂದ 11ರತನಕ ದೇವರಿಗೆ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದ್ದು, ಇದೇ 14ರಂದು ಬೆಳಿಗ್ಗೆ 11ಗಂಟೆಗೆ ಮಕರ ಸಂಕ್ರಮಣ ವಿಶೇಷ ಪೂಜೆ ಸಹಿತ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ.

arla 1

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎನ್.ಎಂ.ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಎಸ್.ಮುರಳೀಧರ ಶೆಟ್ಟಿ, ಪ್ರಧಾನ ಅರ್ಚಕ ಎ.ರಾಜ ಭಟ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ ಆಳ್ವ ಅಗ್ಗೊಂಡೆ ಇವರು ತಿಳಿಸಿದ್ದಾರೆ.

ಇಲ್ಲಿನ ಅರಳ ಮತ್ತು ಕೊಯಿಲ ಗ್ರಾಮಗಳಿಗೆ ಸಂಬಂಧಪಟ್ಟ ಈ ದೇವಳವು ಸುಮಾರು 800 ವರ್ಷಗಳ ಹಿನ್ನೆಲೆ ಹೊಂದಿದೆ. ಈ ದೇವಸ್ಥಾನದಲ್ಲಿ ದಾರು ಶಿಲ್ಪ(ಮರ)ದ ಬೃಹತ್ ಗಾತ್ರದ ವಿಗ್ರಹವು ನೀಳ ನಾಲಗೆ ಹೊರಚಾಚಿದ ರೂಪ ಹೊಂದಿರುವುದು ದಕ್ಷಿಣ ಭಾರತದಲ್ಲೇ ಇದು ಅಪರೂಪ ಎಂದು ಹೇಳಲಾಗುತ್ತಿದೆ.

ಕಳೆದ 12 ವರ್ಷಗಳ ಹಿಂದೆ ಕೇವಲ 108 ದಿನಗಳಲ್ಲಿ ಸಂಪೂರ್ಣ ಪುನರ್‍ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದು, ಇದೀಗ ಬ್ರಹ್ಮಕಲಶೋತ್ಸವ ಪ್ರಯುಕ್ತ ಪ್ರಾಂಗಣ ವಿಸ್ತರಣೆ, ಒಳಾಂಗಣ ಮತ್ತು ಹೊರಾಂಗಣಕ್ಕೆ ಕಲ್ಲು ಹಾಸುವುದು, ಕುಡಿಯುವ ನೀರಿನ ಟ್ಯಾಂಕ್ ರಚನೆ ಮತ್ತಿತರ ರೂ 80ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *