ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನೀಡುತ್ತಾ ಬರುತ್ತಿರುವ ಆಳ್ವಾಸ್ ವರ್ಣ ವಿರಾಸತ್ಪ್ರಶಸ್ತಿಯನ್ನು ಹಿರಿಯ ಕಲಾವಿದ ರಾಜಸ್ಥಾನದ ರೇವ ಶಂಕರ ಶರ್ಮ ಅವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾನುವಾರ ಸಂಜೆ ವಿರಾಸತ್ ವೇದಿಕೆಯಲ್ಲಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಅಭಯಚಂದ್ರ ಜೈನ್, ಉದ್ಯಮಿ ಕೆ.ಶ್ರೀಪತಿ ಭಟ್, ಜಯಕರ ಆಳ್ವ, ಮೀನಾಕ್ಷಿ ಆಳ್ವ, ಹಿರಿಯ ಚಿತ್ರಕಲಾವಿದ ದೇವದಾಸ ಶೆಟ್ಟಿ, ಕಲಾವಿದರಾದ ಕೋಟಿ ಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ಪುರುಷೋತ್ತಮ ಅಡ್ವೆ, ಆಳ್ವಾಸ್ನ ಟ್ರಸ್ಟಿ ವಿವೇಕ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

