ಬಂಟ್ವಾಳ : ಲಯನ್ಸ್ ಕ್ಲಬ್ ಇಂಟರ್‍ನ್ಯಾಶನಲ್ ಇದರ ಶತಮಾನೊತ್ಸವ ಸಂಬ್ರಮಾಚರಣೆಯ ಸಂದರ್ಭ ಬಂಟ್ವಾಳ ಲಯನ್ಸ್ ಮತ್ತು ಲಯನೆಸ್ ಕ್ಲಬ್ ಜ.24ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟುವಿನಲ್ಲಿ ಸ್ನೇಹಾಂಜಲಿ ಸೇವಾ ಸಂಘ ಮತ್ತು ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಹಯೋಗದೊಂದಿಗೆ ಬೆಳಿಗ್ಗೆ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ನಡೆಯಲಿದೆ. ಜಿಲ್ಲಾ ಗವರ್ನರ್ ಲಯನ್ ಎಂ. ಅರುಣ್ ಶೆಟ್ಟಿ ಉದ್ಘಾಟಿಸಲಿದ್ದು, ಬಂಟ್ವಾಳ ಲಯನ್ಸ್ ಕ್ಲಬ್‍ನ ಅಧ್ಯಕ್ಷ ಲಕ್ಷ್ಮಣ ಕುಲಾಲ್ ಅಗ್ರಬೈಲು ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಲಯನ್ಸ್ ಉಪಾಧ್ಯಕ್ಷ ಸುಧಾಕರ ಆಚಾರ್ಯ, ಶಾಲಾ ಎಸ್‍ಡಿಎಂಸಿ ಕಾರ್ಯಧ್ಯಕ್ಷ ಶ್ರೀಧರ ಅಮೀನ್, ಶಾಲಾ ಅಧ್ಯಕ್ಷ ಸತೀಶ್ ಕುಲಾಲ್, ಸ್ನೇಹಾಂಜಲಿ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಮಿತ್ತಬೈಲು, ಲಯನೆಸ್ ಅಧ್ಯಕ್ಷೆ ದೇವಿಕಾ ದಾಮೋದರ್ ಉಪಸ್ಥಿತರಿರುವರು. ನಂತರ ಲಯನ್ಸ್ ಸೇವಾ ಮಂದಿರದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ಕಾರ್ಯಾಗಾರ, ಎಸ್‍ವಿಎಸ್ ಇಂಗ್ಲಿಷ್ ಮೀಡಿಯಂ ಶಾಲೆಗೆ ಬಸ್ಸು ತಂಗುದಾಣ ಕೊಡುಗೆ, ಎಸ್‍ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯುವಜನತೆಗೆ ಪ್ರೇರಣೆ ಎಂಬ ವಿಚಾರಗೋಷ್ಠಿ, ಲಯನ್ಸ್ ಸೇವಾ ಮಂದಿರದಲ್ಲಿ ವಿವಿಧ ಸೌಲಭ್ಯಗಳ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
