ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್‍ನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ತಹಶೀಲ್ದಾರ್ ಪುರಂದರ ಹೆಗ್ಡೆ, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಮೆಸ್ಕಾಂ ಸಮಿತಿ ನಿರ್ದೇಶಕ ವೆಂಕಪ್ಪ ಪೂಜಾರಿ, ಗುತ್ತಿಗೆದಾರ ಆಸಿಫ್ ಇಕ್ಬಾಲ್ ಮತ್ತಿತರರು ಇದ್ದರು.

rai

By suddi9

Leave a Reply

Your email address will not be published. Required fields are marked *