ವಿಟ್ಲ : “ ಪ್ರಜಾಪ್ರಭುತ್ವ ಆಡಳಿತದಲ್ಲಿ ನಾಗರೀಕರ ಹಕ್ಕು ಮತ್ತು ಕರ್ತವ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪಾಲಿಸಬೇಕು” ಎಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಸಿ. ಶ್ರೀಧರ್ ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಬಿಲ ನಾರಾಯಣ ಶೆಟ್ಟಿಯವರು ವಹಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ. ಸಲ್ಡಾನ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಟಾಟಾ ಕನ್ಸಲ್ಟೆನ್ಸಿಯವರು ನಡೆಸಿದ “ಡಿಜಿಟಲ್ ಇಂಡಿಯಾ” ಎಂಬ ವಿಷಯದ ಕುರಿತ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಹತ್ತನೇ ತರಗತಿಯ ಕುಮಾರಿ ಶ್ರೀ ಲಕ್ಷ್ಮೀ.ಕೆ ಅವರನ್ನು ಪುರಸ್ಕರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಪೂಜಾ ಸ್ವಾಗತಿಸಿ, ಸಂಪತ್ ಹೆಗ್ಡೆ ಹಾಗೂ ಗ್ರೀಷ್ಮಾ ಆಳ್ವ ಕಾರ್ಯಕ್ರಮ ನಿರ್ವಹಿಸಿದರು, ಮಹಮ್ಮದ್ ಸುಫೈಲ್ ವಂದಿಸಿದರು.

