ಬಂಟ್ವಾಳ:ತಾಲ್ಲೂಕಿನ ಪುರಾಣ ಪ್ರಸಿದ್ಧ ಅರಳ-ಕೊಯಿಲ ಶ್ರೀ ಗುರುಡ ಮಹಾಕಾಳಿ ದೇವಸ್ಥಾನದಲ್ಲಿ ಫೆ.6ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ಫೆ.11ರತನಕ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಇದೇ 4ರಂದು ಸಂಜೆ 5ಗಂಟೆಗೆ ನಡೆಯುವ ಧಾರ್ಮಿಕ ಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್. ಶೆಟ್ಟಿ, ದೇವಳದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎನ್.ಎಂ.ಅಡ್ಯಂತಾಯ ಮತ್ತಿತರ ಗಣ್ಯರು ಭಾಗವಹಿಸುವರು.

heggade_260815-1
ಇಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ‘ಸುದರ್ಶನ ವಿಜಯ’ ಯಕ್ಷಗಾನ ಸಹಿತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ರಾತ್ರಿ ಭಜನಾ ಸೇವೆ, ಚಂಡಿಕಾ ಯಾಗ, ದೇವಳದ ವೆಬ್‍ಸೈಟ್ ಅನಾವರಣ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅಗ್ಗೊಂಡೆ ಜಗದೀಶ ಆಳ್ವ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಮುರಳೀಧರ ಶೆಟ್ಟಿ   ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *