ಬಂಟ್ವಾಳ: ನಿವೇಶನರಹಿತರಿಗೆ ಜಾಗ ಒದಗಿಸುವುದು ಹಾಗೂ ರಸ್ತೆ ಅಭಿವೃದ್ಧಿ ಸಹಿತ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ಪುರಸಭಾ 2016-17ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 60 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದು, ತಲಾ 2.7 ಲಕ್ಷ ಮಂಜೂರಾತಿಯಾಗಿರುತ್ತದೆ. ಶನಿವಾರ ಅವರಿಗೆ ಸಾಂಕೇತಿಕವಾಗಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪುರಸಭಾ ವ್ಯಾಪ್ತಿಯಲ್ಲಿ ಹಲವು ರಸ್ತೆಗಳಲ್ಲೀಗ ಕಾಂಕ್ರೀಟ್ ಹಾಗೂ ಡಾಂಬರೀಕರಣ ಕಾರ್ಯ ನಡೆಯುತ್ತಿದೆ. ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ ಎಂದು ವಿವರ ನೀಡಿದರು.

1

2
ನಗರೋತ್ಥಾನ ಯೋಜನೆಯಡಿ 9 ಕೋಟಿ:
ನಗರೋತ್ಥಾನ ಯೋಜನೆಯಡಿ 9 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಎರಡು ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬಳಸಾಗುವುದು ಎಂದು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಈ ಸಂದರ್ಭ ಹೇಳಿದರು.
ಸಮಗ್ರ ನೀರಿನ ಯೋಜನೆಯಡಿ ಪೈಪ್ ಕಾಮಗಾರಿ ಸಂದರ್ಭ ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲಾಗುವುದು. ಎರಡು ತಿಂಗಳೊಳಗೆ ಈ ಕೆಲಸ ಮುಗಿಸಲಾಗುವುದು ಎಂದು ಆಳ್ವ ತಿಳಿಸಿದರು.
ಈ ಸಂದರ್ಭ ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಆಶ್ರಯ ಸಮಿತಿ ಸದಸ್ಯ ಖಾಸಿಂ ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಕೆ.ಸುಧಾಕರ್ ಸ್ವಾಗತಿಸಿದರು. ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್ ವಂದಿಸಿದರು.

By Suddi9

Leave a Reply

Your email address will not be published. Required fields are marked *