ಬಂಟ್ವಾಳ : ಬಂಟ್ವಾಳ ತಾಲೂಕು ಪಂಚಾಯತ್,ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಕ್ರೀಡಾಕೂಡವು ಫೆ.26ನೇ ರವಿವಾರ ಬೆಳಗ್ಗೆ 9ಗಂಟೆಗೆ ಬಂಟ್ವಾಳ ಎಸ್.ವಿ.ಎಸ್.ದೇವಳ ಪ್ರೌಢಶಾಲಾ ಆಟದ ಮೈದಾನದಲ್ಲಿ ನಡೆಯಲಿದೆ.
ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸುವರು. ಆಹಾರ ಸಚಿವ ಯು.ಟಿ.ಖಾದರ್, ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ,ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *