ಬಂಟ್ವಾಳ:ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡಿದಾಗ ಮಾತ್ರ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ದೊರೆತು ಸಾಮಾಜಿಕ ಸಮಾನತೆ ಮತ್ತು ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ತಾಲ್ಲೂಕಿನ ಚೆಂಡ್ತಿಮಾರ್ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ವತ್ತು ಆದಿ ದ್ರಾವಿಡ ಸುಧಾರಕ ಸಂಘದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶುಕ್ರವಾರ ನಡೆದ ಧಾಮರ್ಿಕ ಸಭೆಯಲ್ಲಿ ವಿವಿಧ ಆಟೋಟ ಸ್ಪಧರ್ೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಬಂಟ್ವಾಳ ಎಸ್ವಿಎಸ್ ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಕೆ.ತುಕರಾಮ ಪೂಜಾರಿ ಮಾತನಾಡಿ, ಪ್ರಸಕ್ತ ಸಮಾಜದಲ್ಲಿ ಹಿರಿಯರು ಗಳಿಸಿಟ್ಟ ಹೇರಳ ಸಂಪತ್ತಿದ್ದರೂ ಅವರ ಇಳಿವಯಸ್ಸಿನಲ್ಲಿ ಮಕ್ಕಳು ನಿರ್ಲಕ್ಷ ತೋರುವುದು ಅಪರಾಧ ಎಂದರು.
ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಅಧ್ಯಕ್ಷ ಕೆ.ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಜಿಪಮೂಡ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಪಣೋಲಿಬೈಲು ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಸದಸ್ಯ ಪ್ರವೀಣ್ ಜಕ್ರಿಬೆಟ್ಟು, ಮುತ್ತೂರು ಶ್ರೀ ಸತ್ಯಪದ್ನಾಜಿ ಸಾರ ಮುಪ್ಪಣ್ಣ ದೈವಸ್ಥಾನ ಆಡಳಿತ ಮೊಕ್ತೇಸರ ಹರಿಯಪ್ಪ , ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ಶೀನ ಮೂಡಬಿದಿರೆ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಜನಾರ್ದನ ಚೆಂಡ್ತಿಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಂಜೀವ ಚೆಂಡ್ತಿಮಾರ್ ಸ್ವಾಗತಿಸಿ, ಶೀನ ಚೆಂಡ್ತಿಮಾರ್ ವಂದಿಸಿದರು. ಸಭಾ ಕಾರ್ಯಕ್ರಮ ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
