ವಿಟ್ಲ ಶ್ರೀ ನಾಗಬ್ರಹ್ಮ ಸೇವಾ ಟ್ರಸ್ಟ್ ಇರಂದೂರು ಇದರ ವತಿಯಿಂದ ಶ್ರೀ ನಾಗಬ್ರಹ್ಮ ರಕ್ತೇಶ್ವರೀ ಮತ್ತು ಮಲಯಾಯಿ ದೈವಗಳ ವಾರ್ಷಿಕ ಮಹೋತ್ಸವ ಹಾಗೂ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಸ್ಕಾರ ಭಾರತಿ ಇದರ ಜಿಲ್ಲಾ ಸಂಚಾಲಕ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಪ್ರವಚನ ನೀಡಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಅಧ್ಯಕ್ಷತೆ ವಹಿಸಿದ್ದರು.

0ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ ಮತ್ತು ಬಂಟ್ವಾಳ ತಾಲೂಕು ಗೌಡಯ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಲಿಂಗಪ್ಪ ಗೌಡ ಅಳಿಕೆ ಅತಿಥಿಗಳಾಗಿ ಭಾಗವಹಿಸಿದ್ದರು. ಸೇವಾ ಟ್ಟಸ್ಟ್‍ನ ಅಧ್ಯಕ್ಷ ಶಿವರಾಮ ಕುಲಾಲ್ ವೇದಿಕೆಯಲ್ಲಿದ್ದರು. ಈ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯ ಪಿ ಬಿ ಇವರನ್ನು ಗೌರವಿಸಲಾಯಿತು. ಟ್ರಸ್ಟ್‍ನ ಜತೆಕಾರ್ಯದರ್ಶಿ ಹರೀಶ್ ಎಸ್ ಪಿ ಸ್ವಾಗತಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧ್ರಿ ಯೋಜನೆಯ ಸೇವಾ ಪ್ರತಿನಿಧಿ ಯಶೋಧ ವಂದಿಸಿದರು. ಹರೀಶ್ ವಿ ಮಾಡ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ಸಹಕರಿಸಿದರು.

By suddi9

Leave a Reply

Your email address will not be published. Required fields are marked *