ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಆಶ್ರಮದ ಅಷ್ಟಮ ವಾರ್ಷಿಕೋತ್ಸವದ ಪ್ರಯುಕ್ತ ಮಾ.11ರಂದು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಚಂಡಿಕಾಹೋಮ ನೆರವೇರಿತು. ದೇವಳದ ಅರ್ಚಕ ನಾರಾಯಣ ಭಟ್ ಅವರ ನೇತೃತ್ವದಲ್ಲಿ ಪೂಜೆ ನೆರವೇರಿತು. ರಾಮಕೃಷ್ಣ ತಪೋವನದ ಸ್ವಾಮೀ ವಿವೇಕಚೈತನ್ಯಾನಂದ, ಪದ್ಮಪಾದನಂದ ಸ್ವಾಮೀಜಿ ಆಶ್ರಮದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.



