ಬಂಟ್ವಾಳ; ಒಳ್ಳೆಯ ಮನಸ್ಸು , ಮಾನವೀಯತೆ ಹಾಗೂ ಸಾಮರಸ್ಯದಿಂದ ಬದುಕುವ ಸಂಸ್ಕಾರ ಭರಿತ ಶಿಕ್ಷಣ ದೊರೆತಾಗ ಮಕ್ಕಳು ಈ ದೇಶದ ಆಸ್ತಿಗಳಾಗುತ್ತಾರೆ. ಪ್ರತಿಯೊಬ್ಬರ ಬದುಕಿನಲ್ಲಿ ಶಿಕ್ಷಣ ಬಹಳ ಪ್ರಭಾವ ಬೀರುತ್ತದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.
ಅಜಿಲಮೊಗರುವಿನ ಕುಟ್ಟಿಕಳದ ಹಿರಿಯ ಪ್ರಾಥಮಿಕ ಶಾಲೆ ಯ ರಜತಮಹೋತ್ಸವ ಸಮಿತಿ, ಶಾಲಾಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ಶನಿವಾರ ಸಂಜೆ ಶಾಲೆಯ “ದಿ.ಐತಪ್ಪ ಪೂಜಾರಿ ತಿಂಗಳಾಡಿ ವೇದಿಕೆ” ಯಲ್ಲಿ ನಡೆದ ಅಜಿಲಮೊಗರು ಕುಟ್ಟಿಕಳ ಶಾಲೆಯ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಮಕ್ಕಳ ಶಿಕ್ಷಣದ ಹಕ್ಕನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ ಎಂದ ಅವರು, ಸರ್ಕಾರಿ ಶಾಲೆಗಳ ಏಳಿಗೆಗೆ ಸಮುದಾಐದ ಪಾಲ್ಗೊಳ್ಳುವಿಕೆಯೂ ಅಗತ್ಯ ಎಂದ ಅವರು, ಮಕ್ಕಳೂ ಕೂಡ ತನ್ನ ಹೆತ್ತವರಿಗೆ, ತನ್ನ ಊರಿಗೆ, ಕಲಿತ ಶಾಲೆಗೆ, ಕಲಿಸಿದ ಗುರುಗಳಿಗೆ ಹೆಮ್ಮೆ ತರುವಂತಹಾ ಕಾರ್ಯ ಮಾಡುವಂತಾ ಇಚ್ಛಾಶಕ್ತಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ajilamogaru kuttikala
ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ರವರು ದೀಪ ಬೆಳಗಿಸಿ ರಜತಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳು ಪಠ್ಯದ ಜೊತೆಗೆ ಬದುಕಿನಲ್ಲಿ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ತುಂಬುತ್ತದೆ, ನಗರಪ್ರದೇಶಕ್ಕಿಂತಲೂ, ಗ್ರಾಮೀಣ ಪ್ರದೇಶದ ಮಕ್ಕಳು ಈ ನಿಟ್ಟಿನಲ್ಲಿ ಹೆಚ್ಚು ಪುಣ್ಯವಂತರು ಎಂದರು. ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಎಲ್ಲಾ ಪ್ರಾರ್ಥನಾ ಮಂದಿರಕ್ಕಿಂತಲೂ ಶಾಲೆಗೆ ಹೆಚ್ಚಿನ ಮಹತ್ವ ಇದೆ ಎಂದರು.
ಜಿ ಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ತಾ.ಪಂ.ಸದಸ್ಯ ಸಂಪತ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ತಾ.ಪಂ.ಸದಸ್ಯೆ ಬೇಬಿ ಕೃಷ್ಣಪ್ಪ , ಎಪಿಎಂಸಿ ಸದಸ್ಯರಾದ ಹರೀಶ್ಚಂದ್ರ ಪೂಜಾರಿ, ಕಾಂಚಲಾಕ್ಷಿ, ಅಕ್ರಮಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜೀವವಿಮಾ ಅಧಿಕಾರಿ ಮಧ್ವರಾಜ್ ಕಲ್ಮಾಡಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ವೇಣುಗೋಪಾಲ್, ಮಣಿನಾಲ್ಕೂರು ಸೇ.ಸಹಕಾರಿ ಬ್ಯಾಂಕ್ ಮ್ಯಾನೇಜರ್ ಸುಧಾಕರ್ ಶೆಟ್ಟಿ, ನೇರಳಕಟ್ಟೆ ಸೇ.ಸಹಕಾರಿ ಬ್ಯಾಂಕ್ ಮ್ಯಾನೇಜರ್ ಸಂಜೀವ ಪೂಜಾರಿ, ಗ್ರಾ.ಪಂ.ಸದಸ್ಯರಾದ ಶಿವಪ್ಪ ಪೂಜಾರಿ, ಆದಂ ಕುಂಞÂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರುಕ್ಮಯ ಪೂಜಾರಿ, ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷ ಪುರುಷೋತ್ತಮ ಬಿ ವೆ ಪೂಜಾರಿ, ಅಬ್ದುಲ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ದೇವ ಕುಮಾರ್ ರವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಶಾಲಾಮುಖ್ಯಶಿಕ್ಷಕಿ ಗೀತಾಬಾಯಿ ವರದಿ ವಾಚಿಸಿದರು. ಸಹಶಿಕ್ಷಕ ಸುಬ್ರಹ್ಮಣ್ಯ ಪ್ರತಿಭಾಪುರಸ್ಕಾರ ವಿಜೇತರ ಪಟ್ಟಿ ವಾಚಿಸಿದರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಬೊಳ್ಳುಕಲ್ಲು ನಾರಾಯಣ ಪೂಜಾರಿ ಸ್ವಾಗತಿಸಿದರು. ಸಹಶಿಕ್ಷಕ ಜಗದೀಶ್ ವಂದಿಸಿದರು. ಹರಿಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.
ಸಭಾಕಾರ್ಯಕ್ರಮಕ್ಕೆ ಮುನ್ನ ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಬಳಿಕ ಪ್ರಿಯದರ್ಶಿನಿ ಯುವಕಮಂಡಲದ ಸದಸ್ಯರಿಂದ ಸತ್ಯ ತೆರಿನಗ ಹಾಗೂ ದೇವೆರೆ ತೀರ್ಪು ಸಾಮಾಜಿಕ ನಾಟಕ ನಡೆಯಿತು.

By suddi9

Leave a Reply

Your email address will not be published. Required fields are marked *