ಬೆಂಗಳೂರು: ಭಂಡಾರಿ ಮಹಾ ಮಂಡಲದ ನಿಯೋಗವು ಇಂದಿಲ್ಲಿ ಗುರುವಾರ ಪೂರ್ವಾಹ್ನ ಬೆಂಗಳೂರಿನ ಗಾಂಧಿ ಭವನದ ಸನಿಹದಲ್ಲಿನ ಸರಕಾರಿ ಅಧಿಕೃತ ನಿವಾಸದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್‍ನ ಸಭಾಪತಿ, ಕರ್ನಾಟಕ ರಾಜ್ಯ ಸರಕಾರದ ಸಾಮ್ಯತ್ವದ (ವಿಧಾನ ಪರಿಷತ್ ಆಡಳಿತ್ವದ) ಗಡಿನಾಡ ಕನ್ನಡಿಗರ ಸೇವಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಿ.ಹೆಚ್ ಶಂಕರಮೂರ್ತಿ ಅವರನ್ನು ಭೇಟಿ ನೀಡಿ ಮೇ.08ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಬಾರ್ಕೂರುನಲ್ಲಿ ನಡೆಸಲು ಉದ್ದೇಶಿಸಿರುವ ಭಂಡಾರಿ ಮಹಾ ಸಮಾವೇಶನದ ಭವ್ಯ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿತು.Kacchur @Shankarmoorti-3

Kacchur @Shankarmoorti-B1

ಭಂಡಾರಿ ಮಹಾ ಮಂಡಲದ ಸಂಸ್ಥಾಪಕಧ್ಯಕ್ಷ, ಶ್ರೀ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಹಾಗೂ ಕಚ್ಚೂರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್ ಬಾರ್ಕೂರು ಅಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಅವರು ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಅವರಿಗೆ ಆಹ್ವಾನಿಸಿ ಜಗದ್ವ್ಯಾಪಿ ಪಸರಿರುವ ಪ್ರತಿಷ್ಠಿತ ಭಂಡಾರಿ ಸಮುದಾಯವು ತನ್ನ ಕಲದೇವರನ್ನು ಆರಾಧಿಸಿರುವ ಅಂದಾಜು ಒಂಭತ್ತು ಶತಮಾನಗಳ ಇತಿಹಾಸವುಳ್ಳ ಕಚ್ಚೂರು ಶ್ರೀ ನಾಗೇಶ್ವರ ದೇವರ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಸಿದ್ಧತೆ ಬಗ್ಗೆ ಸಂಕ್ಷೀಪ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಮಹಾ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಮತ್ತು ಸವಿತಾ ಮಾರ್ಗದರ್ಶಿ ಮಾಸಿಕದ ಸಂಪಾದಕ ಸೋಮಶೇಖರ ಎಂ.ಭಂಡಾರಿ, ಉತ್ಸವ ಸಮಿತಿ ಅಧ್ಯಕ್ಷ ಡಾ| ಶಿವರಾಮ ಕೆ.ಭಂಡಾರಿ, ಪತ್ರಕರ್ತ ಸೋಮಶೇಖರ್ ಪಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *